Site icon PowerTV

‘ಸೋಲು ಏಕೆ ಆಯ್ತು, ಏನು ಆಯ್ತು’ ಅಂತಾ ಪರಾಮರ್ಶೆ ಮಾಡಿದ್ದೇವೆ : ಬೊಮ್ಮಾಯಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿನ ಬಗ್ಗೆ ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲು ಏಕೆ ಆಯ್ತು, ಏನು ಆಯ್ತು ಅಂತಾ ಪಕ್ಷದ ನಾಯಕರು ಚರ್ಚಿಸಿದ್ದೇವೆ ಎಂದು ತಿಳಿಸಿದರು.

ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಇಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಅವರನ್ನು ಭೇಟಿ ಮಾಡಿದ್ದೇನೆ. ವಿ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ : ನೀನೆ ನನ್ನ ಹೀರೋ, ನೀವು ಸಿಎಂ ಕುರ್ಚಿಯಲ್ಲಿ ಕೂರುವಂತಾಗಲಿ : ಡಿಕೆಶಿ ಪುತ್ರಿ

ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕವಾಗಿರು ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ವಿಚಾರ. ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವುದನ್ನು ಕಾದು ನೋಡೊಣ ಎಂದು ಬೊಮ್ಮಾಯಿ ಹೇಳಿದರು.

Exit mobile version