Site icon PowerTV

ಕೊನೆಗೂ ಖರ್ಗೆ ಭೇಟಿ ಮಾಡಿದ ಡಿಕೆಶಿ : ಮುಂದೇನು?

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇದೀಗ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊನೆಗೂ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಅಭ್ಯರ್ಥಿಯನ್ನಾಗಿ ಯಾರನ್ನು ಘೋಷಿಸಬೇಕು ಎಂದು ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದರು.

ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಯ ರಾಜಾಜಿ ಮಾರ್ಗ 10ರಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಈಗಷ್ಟೇ ಆಗಮಿಸಿದ್ದಾರೆ. ಅಲ್ಲದೆ, ಖರ್ಗೆಗೆ ಹೂಗುಚ್ಛ ನೀಡಿದ್ದಾರೆ.

ಇದನ್ನೂ ಓದಿ : ‘ಸಿದ್ದು ಸಿಎಂ’ ಆಗಲೆಂದು ಅಭಿಮಾನಿಯಿಂದ ’35 ಕಿ.ಮೀ ದೀರ್ಘ ದಂಡ’ ನಮಸ್ಕಾರ

ಕೆಲವೇ ಕ್ಷಣಗಳಲ್ಲಿ ಉಭಯ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಯಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಸಲಹೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ತಿಳಿಸಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಫಸ್ಟ್ ಎಐಸಿಸಿ ಅಧ್ಯಕ್ಷರನ್ನ ಭೇಟಿ ಆಗುತ್ತೇನೆ

ಮೊದಲು ಎಐಸಿಸಿ ಅಧ್ಯಕ್ಷರನ್ನು ನಾನು ಭೇಟಿ ಆಗುತ್ತೇನೆ. ಎಲ್ಲಾ ನಾಯಕರನ್ನು ಭೇಟಿಯಾಗುತ್ತೇನೆ. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದ ಹಾಗೆ, ಹೈಕಮಾಂಡ್ ಇದೆ, 135 ಶಾಸಕರು ಇದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

Exit mobile version