Site icon PowerTV

ಬಿಗ್ ಅಪ್ಡೇಟ್ : ‘100ಕ್ಕೆ 100ರಷ್ಟು ಸಿದ್ದು ಸಿಎಂ’ ಆಗ್ತಾರೆ ಎಂದ ಸಿದ್ದು ಆಪ್ತ

ಬೆಂಗಳೂರು : ಕರುನಾಡ ದೊರೆ (ಮುಖ್ಯಮಂತ್ರಿ) ಯಾರಾಗ್ತಾರೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ನಡುವೆ ತಮ್ಮ ನಾಯಕರ ಪರ ಆಪ್ತರು ಬ್ಯಾಟ್ ಬೀಸುತ್ತಿದ್ದಾರೆ.

ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಶಾಸಕ ಕೆ.ಎನ್​ ರಾಜಣ್ಣ ಹೇಳಿಕೆ ನೀಡಿದ್ದಾರೆ. ಮೇ 18ರಂದು ರಾಜ್ಯ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಬಹುದು. ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರವಾಗಿಯೇ ಇದೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಸಿದ್ದರಾಮಯ್ಯಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರ ಇಂದು ಫೈನಲ್​​ ಆಗಲೇಬೇಕು. ಸದ್ಯಕ್ಕೆ ಸಿದ್ದರಾಮಯ್ಯ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಬಹುದು. ಸಚಿವ ಸಂಪುಟ ಸ್ವಲ್ಪ ತಡವಾಗಬಹುದು ಎಂದು ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಇದನ್ನೂ ಓದಿ : ಪಟ್ಟ ಬಿಟ್ಟು ‘ಡಿಕೆಶಿ ಕರ್ಣ’ ಆಗ್ತಾರಾ? ಪಟ್ಟಕ್ಕಾಗಿ ‘ದುರ್ಯೋಧನನ ಅವತಾರ’ ತಾಳ್ತಾರಾ?

ಸಹಕಾರ ಖಾತೆಯೇ ಬೇಕು

ಕಾಂಗ್ಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮೊದಲ ಸಂಪುಟದಲ್ಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ನಾವು ನೀಡಿದ್ದ 5 ಉಚಿತ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ನಾನು ಸಚಿವ ಆಗಲೇಬೇಕು, ಸಹಕಾರ ಸಚಿವ ಸ್ಥಾನವೇ ನನಗೆ ಬೇಕು ಎಂದು ಶಾಸಕ ಕೆ.ಎನ್​.ರಾಜಣ್ಣ ತಮ್ಮ ಹಿರಾದೆ ವ್ಯಕ್ತಪಡಿಸಿದ್ದಾರೆ.

ಸಿಎಂ ಸ್ಥಾನಕ್ಕಾಗಿ ಡಿಕೆಶಿ ಪಟ್ಟು

ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಡಿ.ಕೆ ಶಿವಕುಮಾರ್ ಬಿಗಿ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಸಿದ್ದರಾಮಯ್ಯಗೆ ಒಂದು ಅವಕಾಶ ಕೊಟ್ಟಿದ್ದಿರಾ. ನನಗೆ ಈ ಬಾರಿ ಅವಕಾಶ ನೀಡಿ ಎಂದು ತಮ್ಮ ವಾದ ಮುಂದುವರಿಸಿದ್ದಾರೆ. ಚುನಾವಣೆ ಎದುರಿಸಿದ್ದು ನಾವು. ಕಷ್ಟ ಸಹಿಸಿದ್ದು ನಾವು. ಹೀಗಿದ್ದಾಗ ನಮಗೆ ಅವಕಾಶ ಕೊಡಿ ಎಂದು ಡಿಕೆಶಿ ಬಣ ಆಗ್ರಹಿಸಿದೆ.

Exit mobile version