Site icon PowerTV

ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ, ‘ಮತ್ತೆ ಸಂಸತ್ ಗೆ ಕಳುಹಿಸುತ್ತೇವೆ’ : ಎಚ್.ಡಿ ರೇವಣ್ಣ

ಹಾಸನ : ‘ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‌ಗೆ ಕರ್ಕೊಂಡು ಹೋಗೇ ಹೋಗ್ತಿವಿ’ ಎಂದು ಪುತ್ರ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಐದು ವರ್ಷಕ್ಕೆ ಮಾಡ್ತಿನೋ, ಹತ್ತು ವರ್ಷಕ್ಕೆ ಮಾಡ್ತಿನೋ ಗೊತ್ತಿಲ್ಲ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ. ಕಾಂಗ್ರೆಸ್‌ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಮ್ ಬರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸೋಲಿನಿಂದ ಕಂಗೆಟ್ಟು ‘ಓಡಿ ಹೋಗುವ ಜಾಯಮಾನ ನಮ್ಮದಲ್ಲ’ : ನಿಖಿಲ್ ಕುಮಾರಸ್ವಾಮಿ

ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ

ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುತ್ತೇವೆ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ. ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ ಎಂದು ಖಡಕ್ ಆಗಿಯೇ ತಿಳಿಸಿದ್ದಾರೆ.

ಪ್ರಜ್ವಲ್ ಎಂಪಿ ಚುನಾವಣೆ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಸನ ಜಿಲ್ಲೆಯಿಂದ ಲೋಕಸಭಾ ಚುನಾವಣೆಗೆ ಪುತ್ರ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ‌ ಅವರೇ ಸ್ಪರ್ಧೆ ಮಾಡ್ತಾರೆ ಎಂದು ಖಚಿತಪಡಿಸಿದ್ದಾರೆ.

Exit mobile version