Site icon PowerTV

ಸರ್ಕಾರ ಕೆಡವಿದ್ದು ಸಿದ್ದು; ಕೆ. ಸುಧಾಕರ್​ ಸ್ಪೋಟಕ ಬಾಂಬ್..! 

ಬೆಂಗಳೂರು: ಸಮ್ಮಿಶ್ರ ಸರ್ಕಾರದ (Coalition Government) ಪತನದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಸ್ಫೋಟಕ ಮಾಹಿತಿ ನೀಡಿದ್ದಾರೆ.

ಹೌದು, ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ (Siddaramaiah) ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ (Tweet) ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದು ಪಾತ್ರ ನಿರಾಕರಿಸಲು ಸಾಧ್ಯವೇ? 2018ರಲ್ಲಿ JDS-ಕಾಂಗ್ರೆಸ್ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯ ಹೇಳಿಕೊಳ್ಳಲು ಸಿದ್ದರಾಮಯ್ಯ ಬಳಿ ಹೋಗಿದ್ದೆವು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಅದು ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇರಲು ಬಿಡಲ್ಲ ಎಂದಿರುವುದಾಗಿ ಟ್ವಿಟ್ ಮಾಡಿದ್ದಾರೆ.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

Exit mobile version