Site icon PowerTV

ಉಲ್ಟಾ ಹೊಡೆದ ‘ಕೈ’ ಹೈಕಮಾಂಡ್ : ‘ಸಿದ್ದು ಸಿಎಂ’ ಘೋಷಣೆಗೆ ಬಿಗ್ ಟ್ವಿಸ್ಟ್

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಹುದ್ದೆ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಉಲ್ಟಾ ಹೊಡೆದಿದೆ.

ಎಐಸಿಸಿ ನಾಯಕರು ಈವರೆಗೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡಿಲ್ಲ ಎಂದು ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಲ ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ವದಂತಿಯನ್ನು ಜನ ನಂಬಬಾರದು. ರಾಷ್ಟ್ರಾಧ್ಯಕ್ಷರು ನಾಯಕನ ಹೆಸರನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ನಾಯಕನನ್ನು ಅವಿರೋಧವಾಗಿ ಆಯ್ಕೆ ಮಾಡಲು ನಾಯಕರು ಚರ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸರ್ಕಾರ ಕೆಡವಿದ್ದು ಸಿದ್ದು; ಕೆ. ಸುಧಾಕರ್​ ಸ್ಪೋಟಕ ಬಾಂಬ್..! 

ಇವತ್ತಲ್ಲ, ನಾಳೆ ಸಿಎಂ ಘೋಷಣೆ

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಂಡ ಬಳಿಕ ಅಧಿಕೃತವಾಗಿ ನಾವು ನಿಮಗೆ ಮಾಹಿತಿ ನೀಡುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

Exit mobile version