Site icon PowerTV

ಬಿಗ್ ಅಪ್ಡೇಟ್ : ಡಿಕೆಶಿಗೆ ಮತ್ತೆ ರಾಹುಲ್, ಖರ್ಗೆ ಬುಲಾವ್

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಬುಲಾವ್ ನೀಡಿದ್ದಾರೆ.

ಡಿಕೆಶಿ ತಮ್ಮ ಸಹೋದರ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸದಲ್ಲಿ ಆಪ್ತ ಶಾಸಕರು ಹಾಗೂ ಬೆಂಬಲಿಗರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮಾತುಕತೆಗೆ ಆಹ್ವಾನಿಸಿದ್ದಾರೆ. ಸಂಜೆ ಮತ್ತೆ ಡಿಕೆಶಿ ಜೊತೆ ಮಾತುಕತೆ ನಡೆಸಲಿದ್ದಾರೆ.

ಡಿ.ಕೆ ಶಿವಕುಮಾರ್​ ಅವರು ಹೈಕಮಾಂಡ್​ ನಾಯಕರ ಮುಂದೆ ತಮ್ಮ ವಾದ ಮುಂದುವರಿಸಿದ್ದಾರೆ. ನನಗೆ ಪೂರ್ಣ 5 ವರ್ಷಗಳ ಅಧಿಕಾರ ನೀಡಬೇಕು. ಯಾವುದೇ ಅಧಿಕಾರ ಹಂಚಿಕೆ ಸೂತ್ರಕ್ಕೆ ಸೊಪ್ಪು ಹಾಕಲ್ಲ. ಈವರೆಗೆ ಅಧಿಕಾರ ಹಂಚಿಕೆಯ ಸೂತ್ರ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

ಸರಣಿ ಸಭೆ, ಬಗ್ಗದ ಡಿಕೆಶಿ

ದೆಹಲಿಯ ಜನ್​ಪತ್​​​ 10ರಲ್ಲಿರುವ ಸೋನಿಯಾ ಗಾಂಧಿ ನಿವಾಸ, ರಾಹುಲ್ ಗಾಂಧಿ ಮನೆ, ರಾಜಾಜಿ ಮಾರ್ಗ್​ 10ರಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಿಎಂ ಆಯ್ಕೆ ಸಂಬಂಧ ಸರಣಿ ಸಭೆ ನಡೆಯುತ್ತಿದೆ. ಡಿ.ಕೆ ಶಿವಕುಮಾರ್ ಎಐಸಿಸಿ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ಡಿಕೆಶಿ ಒಪ್ಪದೆ, ತಮ್ಮ ಬಿಗಿಪಟ್ಟು ಮುಂದುವರಿಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯಗೆ ಸತೀಶ್ ಜಾರಕಿಹೊಳಿ ಬೆಂ’ಬಲ’

ಸಿದ್ದು ಸಿಎಂ ಆದ್ರೆ ಖುಷಿ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದು ಖುಷಿ ಆಗಿದೆ ಎಂದು ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿದ್ದಾರೆ. ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಈವರೆಗೂ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋಗಿಲ್ಲ. ಮೊದಲ ಬಾರಿಗೆ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Exit mobile version