Site icon PowerTV

ದೇವೇಗೌಡ್ರು ಮನೆಗೆ ‘ಬೊಮ್ಮಾಯಿ ಅಂಡ್ ಟೀಂ’ ಭೇಟಿ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.​ಡಿ ದೇವೇಗೌಡ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಎಚ್ ಡಿಡಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಹೂಗುಚ್ಚ ನೀಡಿ ಬಸವರಾಜ ಬೊಮ್ಮಾಯಿ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಡಿ ರೇವಣ್ಣ, ಆರ್. ಅಶೋಕ್, ಗೋವಿಂದ ಎಂ.ಕಾರಜೋಳ ಜೊತೆಗಿದ್ದರು.

ದೇವೇಗೌಡರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ ಅವರು, ಪ್ರತಿ ವರ್ಷವೂ ದೇವೇಗೌಡರ ಹುಟ್ಟುಹಬ್ಬಕ್ಕೆ ಬಂದು ಶುಭಾಶಯ ಕೋರುತ್ತಿದ್ದೇವೆ. ಅದೇ ರೀತಿ ಇಂದೂ ಕೂಡಾ ಬಂದು ಶುಭಾಶಯ ಕೋರಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಲಿಂಗಾಯತರಿಗೆ ಯಾವ ಸ್ಥಾನ’ ಕೊಡ್ತಾರೆ ನೋಡೋಣ : ಬೊಮ್ಮಾಯಿ

ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟಕ್ಕೆ ಜೆಡಿಎಸ್ ಬೆಂಬಲ ಕೋರಲು ದೇವೇಗೌಡ ಅವರನ್ನು ಭೇಟಿ ಮಾಡಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಇಂದು ದೇವೇಗೌಡರ ಹುಟ್ಟುಹಬ್ಬ. ಹೀಗಾಗಿ, ಶುಭಕೋರಲು ಬಂದಿದ್ದೇವೆ ಅಷ್ಟೇ. ಬೇರೆ ಏನೂ ಚರ್ಚೆ ನಡೆಸಿಲ್ಲ. ಇನ್ನೂ ಕಾಂಗ್ರೆಸ್ ಸರ್ಕಾರವೇ ರಚನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೊಮ್ಮಾಯಿ ಶುಭಾಶಯ ಕೋರಿದ್ದರು.

Exit mobile version