Site icon PowerTV

ನೂತನ ‘ಸಿಎಂ ಸಿದ್ದು’ಗೆ ಬೊಮ್ಮಾಯಿ ಅಭಿನಂದನೆ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.

ಡಿಕೆಶಿಗೂ ಬೊಮ್ಮಾಯಿ ವಿಶ್

ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಯಾವ ರೀತಿ ನಿಭಾಯಿಸುತ್ತಾರೆ ನೋಡೋಣ

ಕಾಂಗ್ರೆಸ್ ನೀಡಿರುವ ಉಚಿತ ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ರಾಜ್ಯದ ಜನರಿಗೆ ದೊಡ್ಡ ವಿಶ್ವಾಸ ಇದೆ. ಜನರಿಗೆ ನೀಡಿದ ಎಲ್ಲ ಉಚಿತ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಮುಂದೆ ಯಾವ ರೀತಿ ಆಡಳಿತ ನಿಭಾಯಿಸುತ್ತದೆ ಎಂದು ಕಾದು ನೋಡೋಣ. ಜನರು ನಮಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ತೀರ್ಮಾನ ಕೊಟ್ಟಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

 

Exit mobile version