Site icon PowerTV

ಅಧಿಕೃತ ಘೋಷಣೆ ; ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ(Siddaramaiah) ಅವರಿಗೆ ಒಲಿದಿದೆ.  ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ.

ಹೌದು, ಕರ್ನಾಟಕದ 24 ನೇ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ಚೀಕಾರ ಮಾಡಲಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಶುರುವಾಗಿದ್ದ ಸಿಎಂ ಸ್ಥಾನದ ಆಯ್ಕೆಯ ಹಗ್ಗ ಜಗ್ಗಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಿ ಅಧಿಕೃತ ಮುದ್ರೆಯನ್ನು ಒತ್ತಿದೆ.

ಇನ್ನೂ ಶುಕ್ರವಾರ ಅಮವಾಸ್ಯೆ ಹಿನ್ನೆಲೆ ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿಕ ಕಂಠೀರವ ಕ್ರೀಡಾಂಗಣದಲ್ಲಿ (Kantheerava Stadium) ನಡೆಯಲಿದೆ.

Exit mobile version