Monday, August 25, 2025
Google search engine
HomeUncategorizedIPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ವರ್ಸಸ್ ಹೈದರಾಬಾದ್ ಪಂದ್ಯ; ಗೆದ್ದರಷ್ಟೇ ಪ್ಲೇಆಫ್​ ಕನಸು ಜೀವಂತ...! 

IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ವರ್ಸಸ್ ಹೈದರಾಬಾದ್ ಪಂದ್ಯ; ಗೆದ್ದರಷ್ಟೇ ಪ್ಲೇಆಫ್​ ಕನಸು ಜೀವಂತ…! 

ಬೆಂಗಳೂರು : ಐಪಿಎಲ್​ನ 6ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯಲಿದೆ.

ಹೌದು, ಇಂದು ಆರ್​ಸಿಬಿ ಮತ್ತು ಹೈದರಾಬಾದ್ ತಂಡ ಮುಖಾಮುಖಿಯಾಗಲಿದ್ದಾರೆ.

ಇನ್ನೂ ಇವತ್ತು ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿರುವ ಫಾಫ್ ಡುಪ್ಲೆಸಿಸ್ (Faf Duplessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ (SRH vs RCB) ತಂಡವನ್ನು ಎದುರಿಸಲಿದೆ.

ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್​ಸಿಬಿ  12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ. ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.

ಆರ್​​ಸಿಬಿ ತಂಡ

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕೇದರ್ ಜಾಧವ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜ್ಲೆವುಡ್, ಹರ್ಷಲ್ ಪಟೇಲ್, ಸುಯಶ್ ಪ್ರಬ್ ಪಟೇಲ್ , ವಿಜಯ್‌ಕುಮಾರ್ ವೈಶಾಕ್, ಮೈಕೆಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ, ವೇಯ್ನ್ ಪಾರ್ನೆಲ್, ಸೋನು ಯಾದವ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್.

ಸನ್‌ರೈಸರ್ಸ್ ಹೈದರಾಬಾದ್ ತಂಡ

ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments