Site icon PowerTV

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲರಿಗೂ ಆಹ್ವಾನ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು: ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ​ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆಶಿವಕುಮಾರ್​ ಪ್ರಮಾಣ ವಚನ ಸ್ಚೀಕರಿಸಲಿದ್ದಾರೆ. 

ಹೌದು,ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಹೇಗೆ ನಡೆಯುತ್ತಿದೆ ಎಂದು ವೀಕ್ಷಸಿಸಲು ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮ ಸಿದ್ಧತೆ ಬಗ್ಗೆ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದೆ.  ನಾಳಿನ ಕಾರ್ಯಕ್ರಮಕ್ಕೆ ಬಿಜೆಪಿ ನಾಯಲರು, ವರಿಷ್ಠರು, ಮುಖಂಡರು,ಅಧಿಕಾರಿಗಳು ಗಣ್ಯರು ಎಲ್ಲರಿಗೂ ಆಹ್ವಾನ ಇರುತ್ತದೆ ಎಂದರು.

 

2ನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ

ನಾಳೆ ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್ ಕಲಿಗಳಿಗೆ ಪಟ್ಟಾಭಿಷೇಕ ನಡೆಯಲಿದೆ. ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ಇದೆ.

 

Exit mobile version