Site icon PowerTV

Virat Kohli: 4 ವರ್ಷಗಳ ಬಳಿಕ ಶತಕ ಸಿಡಿಸಿದ ಕಿಂಗ್ ಕೊಹ್ಲಿ

ಬೆಂಗಳೂರು : ಐಪಿಎಲ್​ನ 6ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಿನ್ನೆ ನಡೆದ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಮತ್ತು ಹೈದರಾಬಾದ್ ತಂಡ ಮುಖಾಮುಖಿಯಾಗಿದ್ದು ,ನಿನ್ನೆ ಇಬ್ಬರ ನಡುವೆ ರೋಚಕ ಪಂದ್ಯ ನಡೆದಿದೆ.

ಹೌದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ಗಳು ಅಬ್ಬರಿಸುತ್ತಿದ್ದಾರೆ. ಕಿಂಗ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ಇದು ಕೊಹ್ಲಿ ಬ್ಯಾಟ್ ನಿಂದ ಬಂದ ಈ ಟೂರ್ನಿಯ ಮೊದಲ ಶತಕವಾಗಿದೆ.

ಇನ್ನೂ ಕಿಂಗ್ ಕೊಹ್ಲಿ 2019 ರಲ್ಲಿ ಏಷ್ಯಾಕಪ್​ನಿಂದ  ಕೆಕೆಆರ್ ವಿರುದ್ಧ ಕೊನೆಯ ಬಾರಿ ಶತಕ ಬಾರಿಸಿದ್ದರು. ಇದೀಗ ಎಸ್​ಆರ್​ಹೆಚ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಐಪಿಎಲ್​ನಲ್ಲಿಯೂ ಶತಕ ಸಿಡಿಸಿದರು.

ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಶತಕ ಬಾರಿಸುದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕೊಹ್ಲಿ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. 62 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಐಪಿಎಲ್​ನಲ್ಲಿ ಇದು 4 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬಂದ ಶತಕವಾಗಿದೆ.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ (71) ಜೊತೆಗೂಡಿ ಮೊದಲ ವಿಕೆಟ್​ಗೆ ದಾಖಲೆಯ 172 ರನ್​ಗಳ ಜೊತೆಯಾಟವಾಡಿದ್ದರು.ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Exit mobile version