Site icon PowerTV

ಉಚಿತ ಗ್ಯಾರಂಟಿ : ‘ಕೇಂದ್ರ ಸರ್ಕಾರದ ಕಡೆ ಬೊಟ್ಟು’ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳಿಗ ಅನುಮೋದನೆ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 5 ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ರೂಪಾಯಿ ಆಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂಪಾಯಿ ಬರಬೇಕಿದೆ ಎಂದು ಕೇಂದ್ರದ ಕಡೆ ಬಾಣ ಬಿಟ್ಟರು.

ಕರ್ನಾಟಕದಿಂದ 4 ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂಪಾಯಿ ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಇದನ್ನೂ ಓದಿ : ‘ಸಿದ್ದು-ಡಿಕೆಶಿ’ಗೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ, ಬೊಮ್ಮಾಯಿ

ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಇಂದಿರಾ ಕ್ಯಾಂಟೀನ್​ ಸೇರಿ ಅನೇಕ ಯೋಜನೆ ಜಾರಿ ಮಾಡಿದ್ದೆವು. ಆದರೆ, ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ ಎಂಬ ವಿಶ್ವಾಸ ಜನರಲ್ಲಿದೆ ಎಂದು ಹೇಳಿದರು.

ಮೋದಿಯೇ ಅಪ ಪ್ರಚಾರ ಮಾಡಿದ್ರು

ನಾವು ಭರವಸೆಗಳನ್ನು ಈಡೇರಿಸುತ್ತೇವೆ. ಆದರೆ, ಪ್ರತಿಪಕ್ಷಗಳು ತಪ್ಪು ಪ್ರಚಾರ ಮಾಡಿದವು. ನಾವು ಭರವಸೆ ಈಡೇರಿಸಲಾರೆವು ಎಂದು ಪ್ರಧಾನಿ ನರೇಂದ್ರ ಮೋದಿಯೇ ಅಪ ಪ್ರಚಾರ ಮಾಡಿದ್ದರು. ಮನ್​ ಕೀ ಬಾತ್​ನಲ್ಲೇ ಕಾಂಗ್ರೆಸ್ಸಿಗರಿಂದ ಸುಳ್ಳು ಭರವಸೆ ಎಂದಿದ್ದರು ಅಂತಾ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು.

ನೆಕ್ಸ್ಟ್ ಸಭೆ ಬಳಿಕ ಅಧಿಕೃತ ಜಾರಿ

ಇನ್ನೂ ಮುಂದಿನ ಸಚಿವ ಸಂಪುಟ ಸಭೆ ಬಳಿಕ ಐದು ಉಚಿತ ಗ್ಯಾರಂಟಿಗಳ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದು. ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ. ಹೊಸ ಸ್ಪೀಕರ್ (ಸಭಾಪತಿ)ಯನ್ನು ಆಯ್ಕೆ ಮಾಡಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

Exit mobile version