Site icon PowerTV

ಸಿಎಂ ಕಚೇರಿಯ ನಾಮಫಲಕ ಬದಲಾವಣೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ವಿಧಾನಸೌಧ ಸಿಎಂ ಅಧಿಕೃತ ಕೋಣೆಯಲ್ಲಿದ್ದ ನಾಮ ಫಲಕವನ್ನು ಬದಲಿಸಲಾಗಿದೆ.

ಹೌದು,ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ತೆಗೆದು ಸಿಎಂ ಸಿದ್ದರಾಮಯ್ಯ ಎಂದು ಹೆಸರು ಬದಲಾಯಿಸಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ. ವಿಧಾನ ಸೌಧದ ಮೂರನೇ ಮಹಡಿಯಲ್ಲಿ ರೂಂ ನಂಬರ್ 323ರ ಸಿಎಂ ಕಚೇರಿ ಬಳಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ.ಇನ್ನೂ ಸಿದ್ದರಾಮಯ್ಯ ಕಚೇರಿಯನ್ನು ಹೂಗಳಿಂದ ಸಿಂಗರಿಸಲಾಗಿದೆ.

Exit mobile version