Site icon PowerTV

‘ಶಿವ-ರಾಮಯ್ಯ’ ಸರ್ಕಾರಕ್ಕೆ ಪರಿಪೂರ್ಣ ಬೆಂಬಲ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ನೂತನವಾಗಿ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಹಾಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಹೆಚ್.​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪರಿಪೂರ್ಣ ಬೆಂಬಲ

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದರು.

ಇದನ್ನೂ ಓದಿ : ‘ಸಿದ್ದು-ಡಿಕೆಶಿ’ಗೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ, ಬೊಮ್ಮಾಯಿ

ವಿಜಯೇಂದ್ರ ಅಭಿನಂದನೆ

ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ನೂತನ ಸಚಿವರಿಗೆ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ನಾಡಿನ ಜನರ ನಿರೀಕ್ಷೆಯಂತೆ, ನೀಡಿರುವ ಎಲ್ಲಾ ಭರವಸೆಯನ್ನು ಈಡೇರಿಸುವ ಮೂಲಕ, ತಮ್ಮ ನೇತೃತ್ವದಲ್ಲಿ ಉತ್ತಮ ಆಡಳಿತ ದೊರೆಯಲೆಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Exit mobile version