Site icon PowerTV

ನೋಟು ಬ್ಯಾನ್ : ಪ್ರಧಾನಿ ಮೋದಿಗೆ ಟಕ್ಕರ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ತೆಗೆದುಕೊಂಡಿರುವ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, 2000 ನೋಟ್​ ಬ್ಯಾನ್​ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಜಪಾನ್​ಗೆ ಹೋಗಿದ್ದಾಗ ನೋಟ್​ ಬ್ಯಾನ್​ ಆಗಿತ್ತು. ಈಗಲೂ ಪ್ರಧಾನಿ ಮೋದಿ ಜಪಾನ್​ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ದೇಶದಲ್ಲಿ 2000 ರೂಪಾಯಿ ನೋಟು ಬ್ಯಾನ್ ಆಗಿದೆ ಎಂದು ಖರ್ಗೆ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರ

ನುಡಿದಂತೆ ನಾವು ನಡೆಯುತ್ತೇವೆ

ಮೊದಲ ಕ್ಯಾಬಿನೆಟ್​​ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಹಿಂದಿನ ಸರ್ಕಾರದಲ್ಲೂ ನಾವು ಅಭಿವೃದ್ಧಿ ಕೆಲಸ ಮಾಡಿದ್ದೆವು. ನುಡಿದಂತೆ ನಾವು ನಡೆಯುತ್ತೇವೆ. ನಮ್ಮ ಸರ್ಕಾರ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಮ್ಮದು ಪ್ರೀತಿಯ ಸರ್ಕಾರ

ದೇಶದ ಜನತೆಗೆ ತೊಂದರೆ ಕೊಡುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಒಬ್ಬರನ್ನು ನೋಡಿದರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ನಮ್ಮದು ಪ್ರೀತಿಯ ಸರ್ಕಾರ. ಎಲ್ಲರನ್ನು ಪ್ರೀತಿ, ವಿಶ್ವಾಸದಿಂದ ಕರೆದುಕೊಂಡು ಹೋಗುವಂತಹ ಸರ್ಕಾರವಾಗಿದೆ. ನುಡಿದಂತೆ ನಡೆಯುತ್ತೇವೆ. ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.

Exit mobile version