Site icon PowerTV

‘ಸಿದ್ದು-ಡಿಕೆಶಿ’ಗೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ, ಬೊಮ್ಮಾಯಿ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ತಿಳಿಸಿದ್ದಾರೆ.

ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಬಸವರಾಜ್ ಬೊಮ್ಮಾಯಿ ಅವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ  ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಇದನ್ನೂ ಓದಿ : ಸಿದ್ರಾಮಣ್ಣ.. ಈ ವರ್ಷದ ಬಜೆಟ್ ಗಾತ್ರವೆಷ್ಟು? : ‘ಸಿಎಂ ಸಿದ್ದು’ಗೆ ಪ್ರತಾಪ್ ಸಿಂಹ 5 ಪ್ರಶ್ನೆ

ಕೈಕೊಡದಿರಲಿ 5 ‘ಗ್ಯಾರಂಟಿಗಳು

ಇನ್ನೂ ರಾಜ್ಯ ಬಿಜೆಪಿ, ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದೆ.

ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ. ಅದೇ ರೀತಿ, ಚುನಾವಣಾ ಪೂರ್ವದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ್ದ ಐದು ‘ಗ್ಯಾರಂಟಿಗಳ’ ಆಶ್ವಾಸನೆಯನ್ನು, ರಾಜಸ್ಥಾನ, ಛತ್ತಿಸ್‌ಗಡ, ಹಿಮಾಚಲದಲ್ಲಿ ಕೈಕೊಟ್ಟ ಹಾಗೆ ಕೊಡದೆ, ತಕ್ಷಣವೇ ಅನುಷ್ಠಾನಗೊಳಿಸುತ್ತೀರಿ ಎಂದು ನಾವು ನಂಬಿದ್ದೇವೆ ಎಂದು ಹೇಳಿದೆ.

Exit mobile version