ಬೆಂಗಳೂರು: ಕರ್ನಾಟಕದ ನೂತನ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಗರದ ಕಂಠೀರವ ಮೈದಾನದಲ್ಲಿ ಮಧ್ಯಾಹ್ನ 12-30 ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಜೊತೆಗೆ ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೌದು, ಇಂದು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣ ವಚನ ಸ್ಚೀಕರಿಸಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಆಗಮನ
ಕಾಂಗ್ರೆಸ್‌ನ ಘಟಾನುಘಟಿ ನಾಯಕರು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಬಿಜೆಪಿಯೇತರ ಸರಕಾರಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿಭಾಗಿಯಾಗಲಿದ್ದು, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಸಮಾರಂಭಕ್ಕೆ ಆಗಮಿಸುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಝಡ್ ಪ್ಲಸ್ ಕೆಟಗರಿ ಮತ್ತು ಸಿಆರ್‌ಪಿಎಫ್ ಎಎಸ್‌ಎಲ್ ಪೊ›ಟೆಕ್ಟ್ ರಿಂದ ಭದ್ರತೆ ಕಲ್ಪಿಸಲಾಗುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಝಡ್ ಪ್ಲಸ್ ಮತ್ತು ಎನ್‌ಎಸ್‌ಜಿ ಭದ್ರತೆ ಒದಗಿಸಲಾಗುತ್ತಿದೆ.