Site icon PowerTV

ಇಂಗ್ಲಿಷ್ ನಲ್ಲೇ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹಮದ್

ಬೆಂಗಳೂರು: ರಾಜ್ಯದ ಸಚಿವರಾಗಿ ಇಂದು ಜಮೀರ್​​ ಅಹ್ಮದ್​​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಇಂಗ್ಲೀಷ್​ನಲ್ಲಿ ಜಮೀರ್​​ ಅಹ್ಮದ್​​ ಅವರು ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹೌದು, ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕನ್ನಡ ಕಲಿಯದಿರುವುದು ನಾಚಿಕೆಗೇಡು

ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ? ಎಂದು ಪ್ರಶ್ನೆ ಮಾಡಿದ್ದಾರೆ.

Exit mobile version