Site icon PowerTV

ಸಿಎಂ ಮಾಧ್ಯಮ ಸಲಹೆಗಾರರಾಗಿ ಪ್ರಭಾಕರ್ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಎ. ಸುನಂದಮ್ಮ ಅಧಿಸೂಚನೆ ಹೊರಡಿಸಿದ್ದಾರೆ.

ಮೇ 20 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯವನ್ನು ನೀಡಿ ಆದೇಶಿಸಲಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಅವರು ಮುಕ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಿರಿಯ ಪತ್ರಕರ್ತರಾದ ದಿನೇಶ್‌ ಅಮಿನ್‌ಮಟ್ಟು ಅವರು ಮಾಧ್ಯಮ ಸಲಹೆಗಾರರಾಗಿ ನೇಮಕವಾಗಿದ್ದರು. ಇದೀಗ, ಕೆ.ವಿ ಪ್ರಭಾಕರ್‌ ಅವರು ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ.

Exit mobile version