Site icon PowerTV

ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿ.ವೈ. ವಿಜಯೇಂದ್ರ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನ ಮಗ ಶಿಕಾರಿಪುರದ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಹೆಚ್​ ಮುನಿಯಪ್ಪ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದಾರೆ. 

ಹೌದು, ಇನ್ನೂ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶಿಕಾರಿಪುರ‌ ಕ್ಷೇತ್ರದಿಂದ ಬಿ.ವೈ.‌ವಿಜಯೇಂದ್ರ ಅವರು ಚೊಚ್ಚಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ವಿಜಯೇಂದ್ರ 11,008 ಅಂತರಗಳಿಂದ ಗೆಲುವು ಸಾಧಿಸಿದರು

 

 

Exit mobile version