Site icon PowerTV

ಕಲಬುರಗಿ ಎಸ್ಪಿ, ಕಮಿಷನರ್ ಗೆ ಪ್ರಿಯಾಂಕ್ ಖರ್ಗೆ ಕಾನೂನು ಪಾಠ

ಬೆಂಗಳೂರು : ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಕಲಬುರಗಿ ಎಸ್ಪಿ ಮತ್ತು ಸಿಟಿ ಪೊಲೀಸ್ ಕಮಿಷನರ್‌ ಗೆ ಕಾನೂನು ಪಾಠ ಮಾಡಿದ್ದಾರೆ.

ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕರೆ ಮಾಡಿರುವ ಪ್ರಿಯಾಂಕ್ ಖರ್ಗೆ ಕಾನೂನು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬಗ್ಗೆ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ‌ಜಾಲತಾಣದಲ್ಲಿ ಸ್ವತಃ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಪೋಸ್ಟ್ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮತ್ತು ನಗರ ಪೊಲೀಸ್ ಕಮಿಷನರ್ ಚೇತನ್ ಆರ್ ಅವರ ಜೊತೆಗೆ ಮಾತನಾಡಲಾಗಿದೆ. ಪೊಲೀಸ್ ಠಾಣೆಗಳಲ್ಲಿನ ಭ್ರಷ್ಟಾಚಾರ ಮತ್ತು ಸಂಚಾರ ನಿಯನ ಉಲ್ಲಂಘನೆಗೆ ಕಡಿವಾಣ ಹಾಕಿ ಎಂದು ತಾಕೀತು ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಿದ್ದು ಬಿಡಲ್ಲ ಡಿಕೆಶಿ ಸಿಎಂ ಆಗಲ್ಲ ; ಬಿಜೆಪಿ ಟೀಕೆ

ಅಕ್ರಮ ಜೂಜು ಮತ್ತು ಬೆಟ್ಟಿಂಗ್ ದಂಧೆಗೆ ಬ್ರೇಕ್ ಹಾಕಬೇಕು. ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಬಂದ್ ಮಾಡಬೇಕು. ಮಾದಕ ದಂಧೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಬೇಕು. ರೌಡಿಗಳನ್ನು ಮತ್ತು ದ್ವೇಷ ಭಾಷಣ ಮಾಡುವವರನ್ನು ನಿಯಂತ್ರಿಸಲು ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.

ವಿಶೇಷವಾಗಿ ಸಾರ್ವಜನಿಕರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ಈ ಕುರಿತು ಕೈಗೊಳ್ಳುವ ಎಲ್ಲಾ ಕ್ರಮಗಳನ್ನು ನಾನೇ ಖುದ್ದು ಶೀಘ್ರದಲ್ಲೇ ಪರಿಶೀಲಿಸುತ್ತೆನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Exit mobile version