Site icon PowerTV

ನಟ ಶಿವಣ್ಣ ಮನೆಗೆ ಸುರ್ಜೇವಾಲ ಭೇಟಿ ; ಮಧು ಬಂಗಾರಪ್ಪಗೆ ಸಿಗುತ್ತಾ ಮಂತ್ರಿ ಸ್ಥಾನ..?

ಗಳೂರು: ನಟ ಶಿವರಾಜ್​ ಕುಮಾರ್​ ಮನೆಗೆ ಕಾಂಗ್ರೆಸ್ ನಾಯಕ ರಣದೀಪ್​ ಸುರ್ಜೇವಾಲ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. 

ಹೌದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯ ಜವಾಬ್ದಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರ ಮಂಗಳವಾರ ಬೆಳಗ್ಗೆ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ,ಕುಶಲೋಪರಿ ವಿಚಾರಿಸಿದ್ದಾರೆ.

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಟ್ವೀಟ್ ಮಾಡಿರುವ ಸುರ್ಜೇವಾಲಾ, ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ. ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಕೊಟ್ಟಿತು. ಇತ್ತೀಚೆಗಿನ ಚುನಾವಣೆಯಲ್ಲಿ ಅವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ಹಾಗಾಗಿ, ಅವರಿಗೆ ಧನ್ಯವಾದ ಅರ್ಪಿಸಲು ನಾನು ಅವರ ನಿವಾಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ.

ಇನ್ನೂ ಶಾಸಕ ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡುವ ಕುರಿತು ಈ ವೇಳೇ ಚರ್ಚೆಯಾಗಿದೆ ಎನ್ನಲಾಗಿದೆ. ಮಂತ್ರಿಗಿರಿ ಸಿಗದ ಹಿನ್ನಲೆ ಮಧು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಂದಿಲ್ಲ

 

Exit mobile version