Site icon PowerTV

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಟ್ಟಿಗೆಯಿಂದ ಹಲ್ಲೆ

ಬೆಂಗಳೂರು : ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಕಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

ವಿಧಾನಸಭಾ ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ತೀರಿಸಿಕೊಳ್ಳಲು ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದಾರೆ. ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸಚಿವ ಸುನೀಲ್ ಕುಮಾರ್ ಆಪ್ತನಿಂದ ಗೂಂಡಾಗಿರಿ

ಮಾಣಿ ಜಂಕ್ಷನ್​ ಬಳಿ ಬೈಕ್ ನಲ್ಲಿ ಹೋಗುವಾಗ ಯುವಕರ ಮೇಲೆ ದಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಓಮಿನಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ, ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಹೇಂದ್ರ, ಪ್ರಶಾಂತ್ ಅವರ ತಲೆ, ಕಾಲಿಗೆ ಗಾಯವಾಗಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ವಿಟ್ಲ ಪೋಲೀಸರು ಭೇಟಿ ನೀಡಿ ತನಿಖೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೂವರು ಪೊಲೀಸರ ವಶಕ್ಕೆ

ಘಟನೆ ಸಂಬಂಧ ಮಂಗಳೂರಿ‌ನ ರಾಕೇಶ್, ಮಂಜುನಾಥ್ ಯಾನೆ ಮಂಜು, ಪ್ರವೀಣ್ ನಾಯ್ಕ್ ಮತ್ತಿತರರ ವಿರುದ್ಧ ‌ದೂರು ದಾಖಲಾಗಿದೆ. ಹಲ್ಲೆಗೈದ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Exit mobile version