Site icon PowerTV

ಇದು ರಿವರ್ಸ್​ ಗೇರ್ ಸರ್ಕಾರ ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಅರ್ಥವಾಗುತ್ತದೆ. ಇದು ರಿವರ್ಸ್ ಗೇರ್ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಹೌದು, ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಜನ ಸಮುದಾಯಕ್ಕೆ ಅನ್ಯಾಯ ಆದರೆ ನಾವು ಹೋರಾಟ ಮಾಡುತ್ತೇವೆ. ಕಾನೂನಾತ್ಮಕವಾಗಿ, ರಾಜಕೀಯವಾಗಿ ನಾವು ಹೋರಾಟ ಮಾಡುತ್ತೇವೆ ಎನ್ನುವ ಎಚ್ಚರಿಕೆಯನ್ನು ಕಾಂಗ್ರೆಸ್​​ಗೆ ನೀಡಿದ್ದಾರೆ.

ಇನ್ನೂ ರಿವರ್ಸ್ ಗೇರ್ ಸರ್ಕಾರದ ಗ್ಯಾರಂಟಿಯಲ್ಲೂ ರೀವರ್ಸ್ ಹೋಗುತ್ತಿದ್ದಾರೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಲಿದೆ. ಅಧಿಕಾರ ಬಂದಾಗ ಸ್ವೇಚ್ವಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರವಾಗಿದೆ. ರೀವರ್ಸ್ ಗೇರ್ ಸರ್ಕಾರ ಅಷ್ಟೇ ಅಲ್ಲ ಇದು ಸೇಡಿನ ಕ್ರಮ‌ ಮಾಡುತ್ತಿದ್ದೆ ಎಂದು ಕಿಡಿಕಾರಿದ್ದಾರೆ.

 

 

 

 

Exit mobile version