Site icon PowerTV

ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.

ಹೌದು,ವಿಧಾನಸಭಾ ಚುನಾವಣೆಯಲ್ಲಿ (Election) ರಾಮನಗರದಿಂದ (Ramanagara) ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿಯವರು (Nikhil Kumaraswamy) ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನೂ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಆ ಪತ್ರದಲ್ಲಿ ಪಕ್ಷದ ಜತೆ ಸದಾ ನಿಲ್ಲುವೆ ಎಂದಿದ್ದು, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ, ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ.  ಪಕ್ಷ ಮರು ನಿರ್ಮಾಣದ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Exit mobile version