Sunday, August 24, 2025
Google search engine
HomeUncategorizedಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು:  ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

ಹೌದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ನಿಜ, ಆದರೆ ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ನಾನು ಹೋಗುತ್ತೀನಿ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: New Parliament Building: ನೂತನ ಸಂಸತ್ ಭವನ ಉದ್ಘಾಟನೆ ವೇಳೆ 75 ರೂ. ನಾಣ್ಯ ಬಿಡುಗಡೆ

ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಇನ್ನೂ ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು .

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments