Site icon PowerTV

GT vs MI ಕದನಕ್ಕೆ ಕೌಂಟ್ ಡೌನ್ ಶುರು : ಗೆದ್ದವರು ಫೈನಲ್ ಗೆ, ಸೋತವರು ಮನೆಗೆ

ಬೆಂಗಳೂರು : ಐಪಿಎಲ್ ನಲ್ಲಿ ಇಂದು ಕ್ವಾಲಿಫೈಯರ್-2 ಪಂದ್ಯ ನಡೆಯಲಿದ್ದು, ಬಲಿಷ್ಠ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಮಾಜಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.

ಅಹ್ಮದಾಬಾದ್ ​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕಾಳಗ ನಡೆಯಲಿದೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಉಭಯ ತಂಡಗಳು ಇಂದಿನ ಪಂದ್ಯ ಗೆದ್ದು ಫೈನಲ್ ಗೆ ಲಗ್ಗೆ ಇಡಲು ರಣತಂತ್ರ ರೂಪಿಸಿವೆ.

ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡ ಈವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಈ ಪೈಕಿ ಮುಂಬೈ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಗುಜರಾತ್ ತಂಡ ಒಂದು ಪಂದ್ಯದಲ್ಲಿ ಜಯ ಗಳಿಸಿದೆ.

ಇದನ್ನೂ ಓದಿ : ಮಧ್ವಾಲ್ ಮ್ಯಾಜಿಕ್ ಗೆ ‘ಕನ್ನಡಿಗ ಕುಂಬ್ಳೆ’ ದಾಖಲೆ ಉಡೀಸ್..!

ಮುಂಬೈ ಇಂಡಿಯನ್ಸ್ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿ.ಕೀ.), ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಾಲ್

ಗುಜರಾತ್ ಟೈಟಾನ್ಸ್ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ದಾಸುನ್ ಶಾನಕ, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ

Exit mobile version