Site icon PowerTV

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮಧು ಬಂಗಾರಪ್ಪಗೆ ಒಲಿದ ಮಂತ್ರಿ ಸ್ಥಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಶಿವಮೊಗ್ಗದ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ(Madhu Bangarappa) ಸಚಿವ ಸ್ಥಾನ ಪಡೆದಿದ್ದಾರೆ.

ಹೌದು,  ಇಂದು ರಾಜಭವನದಲ್ಲಿ ಸಚಿವರಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಕಾಂಗ್ರೆಸ್‌ ಪಾಳಯದಲ್ಲಿ ಉತ್ತಮ ವರ್ಚಸ್ಸು ಹೊಂದಿದ್ದಾರೆ. 1966 ಸೆಪ್ಟಂಬರ್ 4ರಂದು ಸೊರಬ ತಾಲೂಕಿನ ಕುಬಟೂರು ಎಂಬಲ್ಲಿ ಜನಿಸಿದ ಮಧು ಬಂಗಾರಪ್ಪ ಪದವೀಧರರು. ತಂದೆ ಎಸ್. ಬಂಗಾರಪ್ಪ ತಾಯಿ ಶಕುಂತಲಾ ಬಂಗಾರಪ್ಪ. ವ್ಯಾಪಾರೋದ್ಯಮಿಯಾದ ಇವರು ರಾಜಕೀಯಕ್ಕೆ ಬರುವ ಮೊದಲು ಸಿನಿಮಾ ಆಡಿಯೋ ಕ್ಷೇತ್ರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

 

 

Exit mobile version