Saturday, August 23, 2025
Google search engine
HomeUncategorizedಭೀಕರ ಅಪಘಾತ : ಸ್ಥಳದಲ್ಲೇ ಆರು ಮಂದಿ ದುರ್ಮರಣ

ಭೀಕರ ಅಪಘಾತ : ಸ್ಥಳದಲ್ಲೇ ಆರು ಮಂದಿ ದುರ್ಮರಣ

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿ ಘಟನೆ ನಡೆದಿದೆ. ಲಾರಿಗೆ ಇಂಡಿಕಾ‌ ಕಾರ್ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಮೃತರು ಎಂದು ತಿಳಿದುಬಂದಿದೆ. ಇವರು ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಇಂಡಿಕಾ ಕಾರಿನ ಟೈರ್ ಸ್ಫೋಟಗೊಂಡ ಹಿನ್ನಲೆ ಇನ್ನೊಂದು ರಸ್ತೆಗೆ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ.

ಕುಷ್ಟಗಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹಗಳನ್ನು ಹೊರಗಡೆ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಜೋಕಾಲಿ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಸಾವಿನಲ್ಲೂ ಒಂದಾದ ದಂಪತಿ

45 ವರ್ಷಗಳ ಕಾಲ ಸಂಸಾರದಲ್ಲಿ ಜೋಡಿಯಾಗಿದ್ದ ದಂಪತಿ ಇದೀಗ ಸಾವಿನಲ್ಲೂ ಒಂದಾಗಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ ಟಕ್ಕಳಕಿ ಹಾಗೂ ಶಾಂತವ್ವ ಟಕ್ಕಳಕಿ ಸಾವಲ್ಲಿ ಒಂದಾದ ಪತಿ-ಪತ್ನಿ.

ನಲವತ್ತೈದು ವರ್ಷಗಳ ಸಂಸಾರ ನಡೆಸಿದ್ದ ದಂಪತಿ ಇಂದು ಅನಾರೋಗ್ಯದ ಕಾರಣ ಶಾಂತವ್ವ ಮೃತಪಟ್ಟಿದ್ದರು. ಬಳಿಕ ಪತ್ನಿ ಸಾವಿನ ಅಘಾತದಿಂದ ರಾಮಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಒಟ್ಟಿಗೆ ದಂಪತಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments