Site icon PowerTV

ಮೋದಿ ಜೀ.. ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಕೊಡಿಸಿ : ಸಿದ್ದರಾಮಯ್ಯ

ಬೆಂಗಳೂರು : ಪ್ರತಿಭಟನಾ ನಿರತ ನೊಂದ ಮಹಿಳಾ ಕುಸ್ತಿಪಟುಗಳಿಗೆ ತಕ್ಷಣ ನ್ಯಾಯ ಒದಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಮಹಿಳಾ ಕುಸ್ತಿಪಟುಗಳ ಬಂಧನವನ್ನು ಖಂಡಿಸಿದ್ದಾರೆ. ಅಲ್ಲದೆ, ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಕುಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಕುಸ್ತಿಪಟುಗಳು ಹೋರಾಡುತ್ತಿದ್ದಾರೆ. ಆದರೆ, ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ : BJP-RSS ನಾಯಕರ 3 ಸುಳ್ಳುಗಳು ಬಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ನರೇಂದ್ರ ಮೋದಿ ಸರ್ಕಾರ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿದೆ. ಆದರೆ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು. ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Exit mobile version