Saturday, August 23, 2025
Google search engine
HomeUncategorizedKarnataka Cabinet : ರಾಜೀನಾಮೆ ಕೊಡಲು ನಾನು ಬಾಡಿಗೆ ಮನೆಯಿಂದ ಬಂದವನಲ್ಲ ; ಬಿ‌ ಕೆ...

Karnataka Cabinet : ರಾಜೀನಾಮೆ ಕೊಡಲು ನಾನು ಬಾಡಿಗೆ ಮನೆಯಿಂದ ಬಂದವನಲ್ಲ ; ಬಿ‌ ಕೆ ಹರಿಪ್ರಸಾದ್

ಬೆಂಗಳೂರು :ರಾಜೀನಾಮೆ ಕೊಡಲು ನಾನು ಬಾಡಿಗೆ ಮನೆಯಿಂದ ಬಂದವನಲ್ಲ ಸ್ವಂತ ಮನೆಯಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್  ಟಾಂಗ್ ನೀಡಿದ್ದಾರೆ.

ಮೇಲ್ಮನೆ ವಿಪಕ್ಷ ನಾಯಕರನ್ನು, ಸಭಾನಾಯಕರನ್ನ ಮಾಡೊದು ಸಂಪ್ರದಾಯ, ಪದ್ದತಿ ಹಿಂದಿನಿಂದಿಲೂ ಇತ್ತು.ಆ ಸಂಪ್ರದಾಯ ಮುರಿದಿದ್ದಾರೆ ಬಿ ಕೆ ಹರಿಪ್ರಸಾದ್ ಕಿಡಿಕಾಡಿದ್ದಾರೆ.

ಹೌದು,ಸುದ್ದಿಗೋಷ್ಟಿಯಲ್ಲಿ‌ ಮಾತನಾಡಿದ ಅವರು ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ಪರಿಷತ್ ನಲ್ಲಿ ಸಭಾನಾಯಕರನ್ನಾಗಿ ಯಾರನ್ನ ಮಾಡಬೇಕೆಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರನ್ನೇ ಕೇಳಿ ಎಂದು ಹೇಳಿದ್ದಾರೆ.

ನಾನು ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. ನನ್ನ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿಯವರು ನನ್ನ ಮೇಲೆ ಜವಾಬ್ದಾರಿ ಕೊಟ್ಟು ಪರಿಷತ್ ಸದಸ್ಯತ್ವ ಸ್ಥಾನ ನೀಡಿದ್ದಾರೆ. ಅದನ್ನ ನಿಭಾಯಿಸುತ್ತಿದ್ದೇನೆ. ರಾಜೀನಾಮೆ ನೀಡುವುದಾದರೆ ಸೋನಿಯಾ ಗಾಂಧಿ ಹಾಗೂ ಸಭಾಪತಿಯವರಿಗೆ ನೀಡುತ್ತೇನೆ. ಸಚಿವ ಸ್ಥಾನ ಇಲ್ಲದಿದ್ದರೂ ನಾನು ಪರಿಷತ್ ನಲ್ಲಿ ಸಾಮಾನ್ಯ ಸದಸ್ಯನಾಗಿರುತ್ತೇನೆ ಎಂದರು.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಕೇವಲ ಒಂದು ಹೆಜ್ಜೆ ಮಾತ್ರ ಇದೆ. ಅಧಿಕಾರ ಹಂಚಿಕೆ ಕೇವಲ ಏಳು ಜನರಿಗೆ ಮಾತ್ರ ಗೊತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ‌ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಅವರಿಗೆ ಮಾತ್ರ ಗೊತ್ತಿದೆ. ಉಳಿದವರು ಯಾರೇ ಮಾತಾಡಿದರೂ ಕೇವಲ ಒಬ್ಬರನ್ನ ಓಲೈಸಿಕೊಳ್ಳಲು ಮಾತ್ರ. ಯಾರೇ ಅಧಿಕಾರ ಹಂಚಿಕೆ ಬಗ್ಗೆ ಮಾತಾಡಿದರೂ ಅದು ಸುಳ್ಳು ಎಂದು ತಿಳಿಸಿದರು.

ನನ್ನ ಸಾಮಾಜಿಕ ನ್ಯಾಯದ ಸಿದ್ದಾಂತಕ್ಕೂ, ಅಹಿಂದ ರಾಜಕೀಯಕ್ಕೂ ವ್ಯತ್ಯಾಸ ಇದೆ. ನಾನು ಸರ್ವಧರ್ಮ ಸಮ ಬಾಳ್ವೆಯಲ್ಲಿ ನಂಬಿಕೆ ಇಟ್ಟವನು. ಕಾಂಗ್ರೆಸ್ ಸಿದ್ದಾಂತದಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಿಯವರೆಗೂ ಇರು ಅಂತಾರೊ, ಅಲ್ಲಿಯವರೆಗೂ ನಾನು ಇರ್ತಿನಿ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ಯಾವ ಸಂಕೋಚವೂ ಇಲ್ಲ, ತಾಪತ್ರಯವೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಅವರವರ ರೀತಿಯಲ್ಲಿ ಪಕ್ಷಕ್ಕಾಗಿ ದುಡಿದಿರುತ್ತಾರೆ. ನಾನು ಪಕ್ಷ ಕಟ್ಟಿದವನು. ರಾಜೀನಾಮೆರಾಜೀನಾಮೆ ವಿಷಯ ಎಲ್ಲಿಂದ ಹುಟ್ಟಿದೆ ಗೊತ್ತಿಲ್ಲ. ರಾಜೀನಾಮೆ ಕೊಡಲು ನಾನು ಬಾಡಿಗೆ ಮನೆಯಿಂದ ಬಂದವನಲ್ಲ ಸ್ವಂತ ಮನೆಯಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.

ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ನಲ್ಲಿ ಸಿಎಂ ಆಗ್ತಾರೆ ಎಂದು ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಕಡೆ ಬಂತು. ಜೆಡಿಎಸ್‌ನ ಮತಗಳೆಲ್ಲ ಕಾಂಗ್ರೆಸ್‌ ಕಡೆ ಬಂದಿದೆ. ಇದರಿಂದ ಜೆಡಿಎಸ್ ಮತಗಳು ಕುಸಿದಿದೆ. ಒಕ್ಕಲಿಗ ಸಮುದಾಯದ ನಾಯಕತ್ವ ನಮಗೆ ಇರಲಿಲ್ಲ, ಡಿ.ಕೆ.ಶಿವಕುಮಾರ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಮಾಡಿದಾಗ, ಅವರು ಸಿಎಂ ಆಗ್ತಾರೆ ಎಂದಾಗ ಒಕ್ಕಲಿಗ ಮತ ಕಾಂಗ್ರೆಸ್‌ ಗೆ ಬಂದಿದೆ. ಡಿ.ಕೆ.ಶಿವಕುಮಾರ್ ಅವರನ್ನ ಈಗ ಡಿಸಿಎಂ ಮಾಡಿದ್ದಾರೆ ಎಂದು ತಿಳಿಸಿದರು.

ಪಕ್ಷ ಭರವಸೆ ಕೊಟ್ಟ ಗ್ಯಾರೆಂಟಿಗಳನ್ನ ಸರ್ಕಾರ ನೂರಕ್ಕೆ ನೂರು ಮಾಡಲಿದೆ. ಯಾವ ಅನುಮಾನವೂ ಬೇಡ. ಗ್ಯಾರಂಟಿಗಳ ಬಗ್ಗೆ ಅಂಕಿ ಅಂಶ ಸಂಗ್ರಹಿಸುತ್ತಿದ್ದಾರೆ. ಸರ್ಕಾರದ ನೀತಿ ನಿಯಮದ ಏನು ಮಾಡಬೇಕೆಂದು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಅದು ಬಂದ ನಂತರ ಗ್ಯಾರಂಟಿ ಖಂಡಿತ ಜಾರಿಯಾಗುತ್ತೆ ಎಂದರು.

ಲೋಕಸಭೆಯಾದ ನಂತರ ಸರ್ಕಾರ ಪತನವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹಗಲು ಕನಸನ್ನ ಕುಮಾರಸ್ವಾಮಿಯವರು ಕಾಣುತ್ತಿದ್ದಾರೆ, ಇಷ್ಟು ದಿನ ರಾತ್ರಿ ಹಗಲು ನಿದ್ದೆ ಇರ್ತಿರಲಿಲ್ಲ. ಈಗ ಹಗಲು ರಾತ್ರಿ ನಿದ್ದೆ ಮಾಡುತ್ತಿದ್ದಾರೆ. ಹಿಗಾಗಿ ಕನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments