Saturday, August 23, 2025
Google search engine
HomeUncategorizedನೂತನ ಸಂಸತ್​ನಲ್ಲಿ ಸುಮಲತಾ ಸೆಲ್ಫಿ ಸಂಭ್ರಮ

ನೂತನ ಸಂಸತ್​ನಲ್ಲಿ ಸುಮಲತಾ ಸೆಲ್ಫಿ ಸಂಭ್ರಮ

ನವದೆಹಲಿ : ಇಂದು ನೂತನವಾಗಿ ನಿರ್ಮಾಣಗೊಂಡಿರುವ ಸಂಸತ್​ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಹಲವು ಗಣ್ಯರು ದೆಹಲಿಗೆ ಹೋಗಿ ಶುಭ ಕಾರ್ಯದಲ್ಲಿ ಭಾಗಿಯಾಗಿದ್ದರು.

ಹೌದು, ಇಂದು ನಡೆದ ಕಾರ್ಯಕ್ರಮದಲ್ಲಿ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್​ ಕೂಡ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಶುಭಾಶಯಗಳನ್ನು ತಿಳಿಸಿದ್ದರು.

ಇನ್ನೂ ಕಾರ್ಯಕ್ರವದಲ್ಲಿ ಭಾಗಿಯಾದ ಕ್ಷಣವನ್ನು ಅವರು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಲೋಕಸಭಾ ಸದಸ್ಯಳಾಗಿ ಇಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಇದು ನಮ್ಮ ದೇಶಕ್ಕೆ ಐತಿಹಾಸಿಕ ದಿನವಾಗಿದೆ ಹಾಗೂ ನಾನು ಅದರ ಭಾಗವಾಗಿರುವುದಕ್ಕೆ ಹೆಮ್ಮೆಪಡುತ್ತೇನೆ.

ಹೊಸ ಸಂಸತ್ ಕಟ್ಟಡವು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಸಂಸತ್ ಭವನವು ಅತ್ಯಾಧುನಿಕ ಸೌಲಭ್ಯದಿಂದ ಕೂಡಿದ್ದು ಅದು ದೇಶದ ಜನರಿಗೆ ಉತ್ತಮ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎನ್ನುವ ವಿಶ್ವಾಸ ನನ್ನದು ಎಂದು ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments