ಬೆಂಗಳೂರು : ಸರ್ಕಾರದ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ (ಮೇ 29 ಸೋಮವಾರ) ಶಾಲೆಗಳು ತೆರೆಯಲಿವೆ.
ಹೌದು,31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ. ಮೇ 29 ಮತ್ತು 30ರಂದು ಶಾಲೆಗಳನ್ನು ಸಂಪೂರ್ಣ ಸ್ವತ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚಿಸಲಾಗಿದೆ.
ಇದನ್ನೂ ಓದಿ: ಮುಂದಿನ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ
ಇನ್ನೂ ಅನುದಾನಿತ ಮತ್ತು ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದ ಏಕರೂಪದ ಚಟುವಟಿಕೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಲ್ಲಾ ಶಾಲೆಗಳಿಗೆ ಪಠ್ಯ ಪುಸ್ತಕವನ್ನು ತಲುಪಿಸಲಾಗಿದ್ದು, ಶಾಲೆ ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಒಂದು ತರಗತಿಯಿಂದ ತೇರ್ಗಡೆ ಹೊಂದಿ ಮುಂದಿನ ತರಗತಿಗೆ ಬರುವ ಮಕ್ಕಳ ಸ್ವಾಗತಕ್ಕೆ ಶಿಕ್ಷಕರು ಸಜ್ಜಾಗಿದ್ದಾರೆ.
ಇಂದಿನಿಂದಲೇ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ.