Monday, August 25, 2025
Google search engine
HomeUncategorizedಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: ನಾವು ಪಠ್ಯಪುಸಕ್ತ ಪರಿಷ್ಕರಣೆಯನ್ನು ಹಂತ ಹಂತವಾಗಿ ಪರಿಶೀಲನೆ ಮಾಡುತ್ತೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೇ ಪ್ರಣಾಳಿಕೆಯಲ್ಲಿ ಹೇಳಿದ್ದು, ನಾವು ಅದನ್ನೂ ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದರು.

ಹಿಂದಿನ ಸರಕಾರ ಶಾಲಾ ಪಠ್ಯ ಪುಸ್ತಕಗಳಲ್ಲಿ(School Textbook) ಸೇರಿಸಿದ ವಿಷಯಗಳನ್ನು ತೆಗೆದುಹಾಕಬೇಕೆಂದು ಬರಹಗಾರರು, ಸಾಹಿತಿಗಳು ರಾಜ್ಯ ಸರಕಾರಕ್ಕೆ ಮಾಡಿದ ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.ಇದರ ಬೆನ್ನಲ್ಲೇ ಇದೀಗ ಶಾಲಾ ಪಠ್ಯ ಪರಿಷ್ಕರಣೆ(School Textbook revision ) ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಮನಸಿಗೆ ಕಲ್ಮಶ ತುಂಬುವ ಯಾವುದೇ ಪಠ್ಯ ಇದ್ದರೂ ಅದನ್ನ ಬದಲಾವಣೆ ಮಾಡುತ್ತೇವೆ. ಪರಿಷ್ಕರಣೆ ಪ್ರಕ್ರಿಯೆ ಶುರು ಮಾಡುತ್ತೇವೆ. ಸಿಎಂ, ಡಿಸಿಎಂ ಮಾರ್ಗದರ್ಶನ ಪಡೆದು ಮುಂದಿ‌ನ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದು, ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ ಎಂದರು.

ನಾಳೆ (ಮೇ 31) ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದು, ಮಕ್ಕಳನ್ನ ನಾನೇ ಬರಮಾಡಿಕೊಳ್ಳುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಶಿಕ್ಷಣ ‌ಇಲಾಖೆ‌ ಸಿದ್ದವಾಗಿದೆ. ಮಕ್ಕಳು ನಿರಾತಂಕವಾಗಿ, ಖುಷಿಯಿಂದ ಶಾಲೆಗೆ ಬನ್ನಿ ಎಂದು ಶಿಕ್ಷಣ ಸಚಿವರು ಕರೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments