Monday, August 25, 2025
Google search engine
HomeUncategorizedಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ, ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್.?

ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ, ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್.?

ಬೆಂಗಳೂರು: ಸರ್ಕಾರ ಬದಲಾದರೂ, ಸ್ಥಳೀಯ ಸಂಸ್ಥೆಗಳಾದ ಬಿಬಿಎಂಪಿ (BBMP), ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ (Zilla and Taluk Panchayat) ಚುನಾವಣೆ ವಿಳಂಬವಾಗುವ ಸಾಧ್ಯತೆಯಿದೆ.

ಹೌದು, ಮುಂದಿನ ವರ್ಷ ಲೋಕಸಭೆ ಚುನಾವಣೆಯ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Election) ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಬಿಜೆಪಿ ಸರ್ಕಾರ ಮಾಡಿದ ಬಿಬಿಎಂಪಿ ವಾರ್ಡ್‌ಗಳ ವಿಂಗಡಣೆಯನ್ನು ನಮ್ಮ ಸರ್ಕಾರ ಪರಿಶೀಲಿಸುತ್ತದೆ ಈ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಲಾಗಿದೆ. ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಲು ನಾವು ಬದ್ಧರಾಗಿದ್ದು, ಅಧಿಕಾರಿಗಳು ಸಜ್ಜಾಗುವಂತೆ ಸೂಚಿಸಿದ್ದೇನೆ ಎಂದು ಬಿಬಿಎಂಪಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ವಿಳಂಬಗೊಳಿಸುವ ಪ್ರವೃತ್ತಿ ಇದೆ. ಆದಷ್ಟು ಬೇಗ ಅವುಗಳನ್ನು ನಡೆಸಲು ಅವಕಾಶ ನೀಡುವಂತೆ ನಾವು ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತ ಬಿ ಬಸವರಾಜ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments