ವಿಜಯಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1 ವರ್ಷ ಮಾತ್ರ ನಡೆಯುತ್ತೆ. ಕಾದು ನೋಡಿ, ಮತ್ತೆ ಕೇಸರಿ ಧ್ವಜ ಹಾರಲಿದೆ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳಿ, ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ನಾಳೆ ಉಚಿತ ಗ್ಯಾರಂಟಿ ಜಾರಿ ಮಾಡ್ತೀವಿ ಎಂದಿದ್ದಾರೆ. ಹೇಗೆ ಮಾಡ್ತಾರೆ ನೋಡೋಣ. ಕಾಂಗ್ರೆಸ್ ನೀಡಿದ ಭರವಸೆಗಳು ಈಡೇರಲು ಸಾಧ್ಯವಿಲ್ಲ. ನಾವು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಶಾಸಕ ದುರ್ಯೋಧನ ಐಹೊಳೆ ಸವಾಲೆಸೆದಿದ್ದಾರೆ.
ಇದನ್ನೂ ಓದಿ : 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಜನರಿಗೆ ಮೋಸ ಮಾಡಬೇಡಿ ಎಂದು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಒಂದು ವರ್ಷದಲ್ಲಿ ಬದಲಾವಣೆ ಆಗಲಿದೆ. ಸರ್ಕಾರ ಬೀಳುತ್ತೆ ಎಂದು ಹೇಳೋದಿಲ್ಲ. ಚೆಂಜ್ ಆಗೋದು ಪಕ್ಕಾ. ಕಾದು ನೋಡಿ ಅದು ಹೇಗೆ ಬದಲಾಗುತ್ತೆ ಎಂದು ದುರ್ಯೋಧನ ಐಹೊಳೆ ಹೇಳಿದ್ದಾರೆ.
ಶ್ರೀ ಕ್ಷೇತ್ರ ಇಂಚಗೇರಿ ಮಠದಲ್ಲಿ ನಿಜರಾಜಯೋಗಿ ಬಾಲಬ್ರಹ್ಮಚಾರಿ ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ ಪುಣ್ಯತಿಥಿ ಸಪ್ತಾಹದಲ್ಲಿ ಪಾಲ್ಗೊಂಡ ಸಂದರ್ಭ. ಇದೇ ವೇಳೆ, ಶ್ರೀ ಶ್ರೀ ಅಭಿನವ ಮಂಜುನಾಥ ಮಹಾಸ್ವಾಮಿಗಳ ಆಶೀರ್ವಾದ ಪಡೆದೆ.
ಈ ವೇಳೆ ಶ್ರೀ ಸದ್ಗುರು ಸಮರ್ಥ ಶ್ರೀ ರೇವಣಸಿದ್ಧೇಶ್ವರ ಮಹಾರಾಜರ ದಿವ್ಯ ಸಾನಿಧ್ಯವಿತ್ತು. pic.twitter.com/wbKPGBvsf0
— Duryodhan Aihole (Modi Ka Parivar) (@DMAiholeBJP) May 31, 2023
ಇದೇ ವೇಳೆ ಶ್ರೀ ಕ್ಷೇತ್ರ ಇಂಚಗೇರಿ ಮಠದಲ್ಲಿ ಶ್ರೀ ರೇವಣಸಿದ್ಧೇಶ್ವರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಾಧವಾನಂದ ಪ್ರಭು ಅವರ ಪುಣ್ಯತಿಥಿ ಸಪ್ತಾಹದಲ್ಲಿ ಅವರು ಪಾಲ್ಗೊಂಡರು. ಶ್ರೀ ಅಭಿನವ ಮಂಜುನಾಥ ಸ್ವಾಮಿಗಳ ಆಶೀರ್ವಾದ ಪಡೆದರು.