Site icon PowerTV

ಸಿಎಂ ಸಿದ್ದರಾಮಯ್ಯಗೆ ಬಸವರಾಜ ಬೊಮ್ಮಾಯಿ ಪತ್ರ..! ಹಾಲಿ ಸಿಎಂಗೆ ಮಾಜಿ ಸಿಎಂ ಪತ್ರದಲ್ಲಿ ಹೇಳಿದ್ದೇನು..?

ಬೆಂಗಳೂರು : ಗ್ಯಾರಂಟಿ ಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಿಎಂಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್

ಹೌದು, ನೀವು ಕಾಂಗ್ರೆಸ್ ಗ್ಯಾರಂಟಿ ಗಳಿಗೆ 50 ಕೋಟಿ ಬೇಕಾಗಬಹುದು ಹೇಳಿದ್ದೀರಿ ಇದರಿಂದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು
ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದು ಯೋಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳವಿರಿ ಎಂಬ ನಂಬಿಕೆ ಇದೆ.

ಇನ್ನೂ ನೀವು ಎಲ್ಲಾ ಗ್ಯಾರಂಟಿಗಳ ಜೊತೆಗೆ ಎಲ್ಲ ಅಭಿವೃದ್ಧಿ ಯೋಜನೆ ಗಳನ್ನು ಮುಂದುವರಿಸಿಕೊಂಡು ಹೋಗಬೇಕು .ಇದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಇದು ಸರ್ಕಾರದ ಜವಬ್ದಾರಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ಯೋಜನೆಗಳನ್ನೂ ಕಡಿತಗೊಳಿಸದಂತೆಯೂ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ವಿಸ್ತಾರವಾಗಿ ಪತ್ರದಲ್ಲಿ ಉಲ್ಲೇಖ ಮಾಡಿ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ.

ಬಸವರಾಜ ಬೊಮ್ಮಾಯಿ ಅವರ ಪತ್ರದಲ್ಲಿ ಏನಿದೆ..?

Exit mobile version