Site icon PowerTV

ಸಿದ್ಧಗಂಗಾ ಮಠಕ್ಕೆ ಅನುದಾನ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ತುಮಕೂರು: ಸಿದ್ಧಗಂಗಾ ಮಠಕ್ಕೆ ಅನುದಾನ ತಡೆಹಿಡಿದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)ನವರು ಮತ್ತೆ ಅನುದಾನ ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಹೌದು ಸಿದ್ಧಗಂಗಾ ಮಠಕ್ಕೆ ತಡೆಹಿಡಿದಿದ್ದ 9.90 ಕೋಟಿ ಅನುದಾನವನ್ನ ಮುಂದುವರಿಸಲು ರಾಜ್ಯ ಸರ್ಕಾರ ಗ್ರೀನ್​ ಸಿಗ್ನಲ್​ ನೀಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ಪ್ರಕರಣದಡಿ ಅನುದಾನ ನೀಡಿ, ಇಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶೀಘ್ರದಲ್ಲಿ  ಕಾಮಗಾರಿ ಮುಂದುವರಿಸಿ ಎಂದು ಲೋಕೋಪಯೋಗಿ ಇಲಾಖೆಗೆ (PWD)ಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸಿದ್ಧಗಂಗಾ ಮಠದ ಅನುದಾನಕ್ಕೆ ತಡೆ : ಸ್ವಾಮೀಜಿಗಳ ಬಳಿ ಚರ್ಚೆ ಮಾಡಿಲ್ಲ ಎಂದ ಸಚಿವ ಜಮೀರ್

ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳ ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ಸರ್ಕಾರ ತಡೆ ಹಿಡಿದಿತ್ತು. ಇದರಲ್ಲಿ 9.90 ಕೋಟಿ ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಸಿದ್ದರಾಮಯ್ಯ ಸೂಚನೆ‌ ನೀಡಿದ್ದಾರೆ.

 

 

 

Exit mobile version