Site icon PowerTV

ಚಾಮರಾಜನಗರದಲ್ಲಿ ಲಘು ವಿಮಾನ ಪತನ ; ಇಬ್ಬರು ಪೈಲಟ್ ಪ್ರಾಣಾಪಾಯದಿಂದ ಪಾರು

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಇಂದು ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದೆ.

ಹೌದು, ಚಾಮರಾಜನಗರ ಜಿಲ್ಲೆಯ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ ಪತನಗೊಂಡಿದ್ದು (Flight Crash), ಇಬ್ಬರೂ ಪೈಲಟ್‌ಗಳು (Pilot) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ  ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದು, ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.

ಘಟನೆ ನಡೆದಿದ್ದು ಹೇಗೆ..? 

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

Exit mobile version