Monday, August 25, 2025
Google search engine
HomeUncategorizedಶೀಘ್ರ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ ಪ್ರಾರಂಭ : ಸಿದ್ದರಾಮಯ್ಯ

ಶೀಘ್ರ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ ಪ್ರಾರಂಭ : ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾರತದಲ್ಲಿನ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ (ಹೈ ಕಮಿಷನರ್) ಬ್ಯಾರಿ ಓ ಫ್ಯಾರೆಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು.

ಇದನ್ನೂ ಓದಿ : ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್

ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments