Site icon PowerTV

ಒಡಿಶಾದಲ್ಲಿ ರೈಲು ಅಪಘಾತ : 50 ಮಂದಿ ದಾರುಣ ಸಾವು, ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಬೆಂಗಳೂರು : ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು 50 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಲಾಗಿದೆ.

ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ  ಅಪಘಾತಕ್ಕೀಡಾಗಿದೆ. ದುರಂತದಲ್ಲಿ 170ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಮಾಹಿತಿಯ ಪ್ರಕಾರ, ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು.

ಆರಂಭಿಕ ಮಾಹಿತಿಯಲ್ಲಿ, ಈ ಕೋಚ್‌ಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ. ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಮೃತರ ಕುಟುಂಬಕ್ಕ 10 ಲಕ್ಷ ಪರಿಹಾರ

ಬಹನಾಗ ನಿಲ್ದಾಣದ ಬಳಿ 3 ರೈಲುಗಳು ಡಿಕ್ಕಿ ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ ಕೇಂದ್ರ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ, ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಪರಿಹಾರ ಘೋಷಣೆ ಮಾಡಿದ್ದಾರೆ.

Exit mobile version