Site icon PowerTV

5 ಗ್ಯಾರಂಟಿ ಈ ಆರ್ಥಿಕ ವರ್ಷದಲ್ಲೇ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲೇ ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕ್ಯಾಬಿನೆಟ್ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ನಾವು ವಿಧಾನಸಭಾ ಚುನಾವನೆ ಸಂದರ್ಭದಲ್ಲಿ ಹಾಗೂ ಅದಕ್ಕೂ ಮುನ್ನ ಪಕ್ಷದ ವತಿಯಿಂದ 5 ಗ್ಯಾರಂಟಿ ಘೋಷಣೆ ಮಾಡಿದ್ದೆವು. ನಾನು ಹಾಗೂ ಕೆಪಿಸಿಸಿಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡ್ ಗಲಿಗೆ ಸಹಿ ಮಾಡಿದ್ದೇವು. ಜನರಿಗೆ ಉಚಿತ ಗ್ಯಾರಂಟಿ ತಲುಪಿಸುತ್ತೇವೆ ಎಂದು ಹೇಳಿದ್ದೆವು ಎಂದು ಹೇಳಿದರು.

ವಿರೋಧ ಪಕ್ಷಗಳು ಹಾಗೂ ಮಾಧ್ಯಮಗಳು ಏನು ಅನಿಸುತ್ತದೆಯೋ ಅದನ್ನು ಹೇಳಿದ್ದೀರಿ. ಊಹಾಪೋಹಗಳನ್ನು ಮಾಡಿದ್ದೀರಿ. ಆದರೆ, ಕ್ಯಾಬಿನೆಟ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ. ನಾನು, ಡಿಕೆಶಿ ಹಾಗೂ ಎಂಟು ಮಂತ್ರಿಗಲು ಪ್ರಮಾಣವಚನ ಸ್ವೀಕಾರ ಮಾಡಿದ್ದೆವು. ಅಂದು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಅಂದೇ ತಾತ್ವಿಕ ಆದೇಶವನ್ನು ಕೊಟ್ಟಿದ್ದೆವು ಎಂದು ತಿಳಿಸಿದರು.

ಈ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದು ವಿಶೇಷವಾಗಿ ಐದು ಗ್ಯಾರಂಟಿಗಳ ಜಾರಿ ಬಗ್ಗೆ ಚರ್ಚಿಸಲು. ಐದು ಗ್ಯಾರಂಟಿಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ. ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೊಳಿಸಬೇಕು ಎಂದು ತೀರ್ಮಾನ ಮಾಡಿದ್ದೇವೆ. ಯಾವುದೇ ಜಾತಿ, ಯಾವುದೇ ಧರ್ಮ, ಯಾವುದೇ ಭಾಷೆ ಎಂಬ ಬೇದಭಾವವಿಲ್ಲದೆ ಸರ್ವರಿಗೂ ಕೊಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಗ್ಯಾರಂಟಿ ನಂ.1

ಗೃಹ ಜ್ಯೋತಿ-200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ಕೊಡುತ್ತೇವೆ. ಎಲ್ಲರಿಗೂ ಉಚಿತವಾಗಿ ಕೊಡುತ್ತೇವೆ ಎಂದು ವಾಗ್ದಾನ ಕೊಟ್ಟಿದ್ದೇವೆ. ಈ ಗ್ಯಾರಂಟಿ ಜಾರಿಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಗ್ಯಾರಂಟಿ ನಂ.2

Exit mobile version