Site icon PowerTV

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ : ಬಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು : ಕಾಂಗ್ರೆಸ್ ಐದು ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಕಾಲೆಳೆದಿದೆ.

ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿಯ ಬಗ್ಗೆ ಘೋಷಿಸಿದರು. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಗೆ ತಿರುಗೇಟು ನೀಡಿದೆ.

ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ. ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ. ಶೋಭಾ ಕರಂದ್ಲಾಜೆ ಅವರೇ, ನಿಮಗೂ ಬಸ್ ಪ್ರಯಾಣ ಫ್ರೀ. ಸಿ.ಟಿ ರವಿ ಅವರೇ, ನಿಮ್ಮ ಮನೆಯವರಿಗೂ 2,000 ರೂ. ಫ್ರೀ ಎಂದು ಛೇಡಿಸಿದೆ.

ಇದನ್ನೂ ಓದಿ : ಫ್ರೀ.. ಫ್ರೀ.. ಫ್ರೀ.. ನನ್ನ ಹೆಂಡತಿಗೂ ಬಸ್ ಪ್ರಯಾಣ ಉಚಿತ : ಸಿಎಂ ಸಿದ್ದರಾಮಯ್ಯ

ಇನ್ನೂ ಬಜರಂಗದಳವನ್ನು ಟಾರ್ಗೆಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ). ಇದು ನಮ್ಮ ಗ್ಯಾರಂಟಿ ಎಂದು ಟ್ವೀಟ್ ಮೂಲಕ ಗ್ಯಾರಂಟಿ ಬಗ್ಗೆ ಮನಬಂದಂತೆ ಹೇಳಿಕೆ ಹರಿಬಿಟ್ಟ ಬಿಜೆಪಿ ನಾಯಕರಿಗೆ ಟಕ್ಕರ್ ನೀಡಿದೆ.

Exit mobile version