Site icon PowerTV

‘ಷರತ್ತು’ಗಳು ಗ್ಯಾರಂಟಿ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ವಿಧಾನಸಭಾಗೂ ಮುನ್ನ ಕಾಂಗ್ರೆಸ್​ ಪಕ್ಷ ತನ್ನ ಪ್ರಣಾಳಿಕೆಯಲ್ಲಿನ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮತದಾರರ ಮುಂದೆ ತೆರೆದಿಟ್ಟಿತ್ತು. ಆದರೆ ಯೋಜನೆಗಳಿಗೆ ಷರತ್ತುಗಳು ಇರಲಿದೆ ಎಂದು ಪ್ರಿಯಾಂಕ್​ ಖರ್ಗೆ ಹೇಳಿಕೆ ನೀಡಿದ್ದಾರೆ.

ಹೌದು,ಚುನುವಣೆಯಲ್ಲಿ ಬಹುಮತ ಪಡೆಯಲು ಭರವಸೆಯ ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದ ಪಕ್ಷ. ಇದೀಗ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಘೋಷಿತ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಇಳಿಕೆ

ವಿಧಾನಸೌಧಕ್ಕೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು ಅವರು ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯೆ ನೀಡಿದ್ದು, “ಕೇಂದ್ರ ಅಥವಾ ರಾಜ್ಯ ಸರ್ಕಾರದ ಪ್ರತಿಯೊಂದು ಯೋಜನೆಯೂ ಕೆಲವು ನಿಯಮ ಮತ್ತು ನಿಬಂಧನೆಗಳನ್ನು ಹೊಂದಿರುತ್ತವೆ” ಎಂದು ಹೇಳಿದ್ದರು.

ಇನ್ನೂ ಇದೇ ವೇಳೆ ಯೋಜನೆಗಳ ಅನುಷ್ಠಾನಕ್ಕೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಎಲ್ಲರಿಗೂ ಉಚಿತ ಎಂಬ ಯಾವುದೇ ಯೋಜನೆ ಇರುವುದಿಲ್ಲ ಎಂದು ಖರ್ಗೆ ಹೇಳಿದರು.

 

 

 

Exit mobile version