Site icon PowerTV

ಆನೆ ದಾಳಿ : ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ರಾಮನಗರ : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹಾಗೂ ಸಂಸದ ಡಿ.ಕೆ ಸುರೇಶ್ ಅವರು ಸಾಂತ್ವನ ಹೇಳಿದರು.

ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಎರಡೂ ಕುಟುಂಬಗಳ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಮಾನವ ಹಾಗೂ ಪ್ರಾಣಿ ಸಂಘರ್ಷ ತಡೆಗೆ ಶಾಶ್ವತ ಕ್ರಮಕೈಗೊಳ್ತೇವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ : ಕಾರು ಅಪಘಾತ : ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ

ಆರ್.ಟಿ.ಜಿ.ಎಸ್ ಮೂಲಕ ಹಣ ಜಮಾ

ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್ ಮೂಲಕ ಹಣ ಜಮಾ ಮಾಡುವಂತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಸೂಚನೆ

ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಪೋಷಕರಿಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಈಶ್ವರ ಖಂಡ್ರೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version