Site icon PowerTV

ಜುಲೈ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು : ಸಿದ್ದರಾಮಯ್ಯ

ದಾವಣಗೆರೆ : ಜುಲೈ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜುಲೈ 3ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜುಲೈ 7ರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಂಪುಟ ಸಭೆ ಪ್ರಾರಂಭವಾದ ಬಳಿಕ ಈ ಬಾರಿಯ ರಾಜ್ಯ ಬಜೆಟ್ ಗಾತ್ರದ ಬಗ್ಗೆ, ಬಜೆಟ್ ಸಿದ್ಧತೆಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಹಿಂದಿನ ಬಿಜೆಪಿ ಸರ್ಕಾರ 39782 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿತ್ತು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳ, ಹಿಂದೆಯೇ ಆಗಿದ್ದ ತೀರ್ಮಾನ

ವಿದ್ಯುತ್ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯುತ್ ದರ ಏರಿಕೆ ಆರ್.ಇ.ಸಿ ನಲ್ಲಿ ಮೊದಲೇ ತೀರ್ಮಾನವಾಗಿದೆ. ಹಿಂದೆಯೇ ಆಗಿದ್ದ ತೀರ್ಮಾನವನ್ನು ಈಗ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನನಗೆ ಹೆಣ್ಣುಮಕ್ಕಳು ಮೇಲೆ ಮಾತ್ರ ನಂಬಿಕೆ : ಡಿ.ಕೆ ಶಿವಕುಮಾರ್

ನೌಕರರಿಗೆ ವೇತನ ಕೊಡಿಸುವ ವ್ಯವಸ್ಥೆ

ಇಂದಿರಾ ಕ್ಯಾಂಟೀನ್‍ಗಳನ್ನು ಮತ್ತೆ ಆರಂಭಿಸಲು ಸಿದ್ಧತೆಗಳನ್ನು ಮಾಡಲು ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ನೌಕರರಿಗೆ ವೇತನ ದೊರೆತಿಲ್ಲವಾದರೆ ಅಥವಾ ಬಾಕಿ ಇದ್ದರೆ ಅದನ್ನು ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯ್ದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ಹಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ ಎಂದು ಹೇಳಿದ್ದಾರೆ.

Exit mobile version