Site icon PowerTV

WTC ಫೈನಲ್ : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ : ಹೀಗಿದೆ ಪ್ಲೇಯಿಂಗ್ ಇಲೆವೆನ್

ಬೆಂಗಳೂರು : ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ.

ಮೊದಲು ಬೌಲಿಂಗ್ ಆಯ್ದುಕೊಂಡಿರುವ ಭಾರತ ನಾಲ್ವರು ವೇಗಿಗಳು ಹಾಗೂ ಒಬ್ಬ ಸ್ಪಿನ್ನರ್​ಗೆ ಅವಕಾಶ ನೀಡಿದೆ. ಒಟ್ಟು 5 ದಿನಗಳ ಕಾಲ ನಡೆಯಲಿರುವ ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ 2023 ಫೈನಲ್ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಓವಲ್‌ನಲ್ಲಿ ಭಾರತದ ಸಾಧನೆ

ಓವಲ್‌ನಲ್ಲಿ ಟೀಂ ಇಂಡಿಯಾ ಉತ್ತಮ ದಾಖಲೆ ಹೊಂದಿಲ್ಲ. ಇವರೆಗೆ ಇಲ್ಲಿ 14 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಪೈಕಿ 2ರಲ್ಲಿ ಮಾತ್ರ ಗೆಲುವು ಸಾಧಿಸಿದೆ. 5 ಪಂದ್ಯಗಳಲ್ಲಿ ಸೋಲು, 7 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

ಇದನ್ನೂ ಓದಿ : ಆಸ್ಟ್ರೇಲಿಯಾಗೆ ಕಿಂಗ್ ಕೊಹ್ಲಿಯೇ ವಿಲನ್!

ಭಾರತದ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆ.ಎಸ್ ಭರತ್(ವಿ.ಕೀ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನಾ ಖವಾಜಾ, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್

Exit mobile version