Site icon PowerTV

WTC ಫೈನಲ್ : 469 ರನ್ ಗೆ ಆಸ್ಟ್ರೇಲಿಯಾ ಆಲೌಟ್

ಬೆಂಗಳೂರು : ಭಾರತ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್ ಗೆ ಆಲೌಟ್ ಆಗಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆಯಿತು.

ಮೊದಲ ದಿನ ಪ್ರಾಬಲ್ಯ ಮೆರೆದಿದ್ದ ಆಸಿಸ್ ಬ್ಯಾಟರ್ ಗಳು ಎರಡನೇ ದಿನವಾದ ಇಂದೂ ಸಹ ಬೊಂಬಾಟ್ ಪ್ರದರ್ಶನ ನೀಡಿದರು. ಆದರೆ, ದಿನದ ಕೊನೆಯಲ್ಲಿ ಟೀಂ ಇಂಡಿಯಾ ಬೌಲರ್ ಗಳು ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 163, ಸ್ವೀವ್ ಸ್ಮಿತ್ 121, ವಾರ್ನರ್ 43, ಅಲೆಕ್ಸ್ ಕ್ಯಾರಿ 48 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಸಿರಾಜ್ 4, ಮೊಹಮ್ಮದ್ ಶಮಿ ಹಾಗೂ ಶಾರ್ದುಲ್ ತಲಾ ಎರಡು ವಿಕೆಟ್, ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಮಚಿದರು.

Exit mobile version